ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಮಾಸಿಕ ಸಭೆಯು ಅಧ್ಯಕ್ಷ ಕೆ.ನಾರಾಯಣ ಹೆಗ್ಡೆ ಯವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರೋಟರಿ ಸಭಾಂಗಣದಲ್ಲಿ ನಡೆಯಿತು . ಮುಖ್ಯ ಅತಿಥಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಭಾಗವಹಿಸಿದ್ದರು. ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ಅವರನ್ನು ಕೋವಿಡ್ 19 ಸಂದರ್ಭದಲ್ಲಿ ಅವರು ಸಮಾಜಕ್ಕೆ ಮಾಡಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕ್ಲಬ್ ನ ಕಾರ್ಯದರ್ಶಿ ವಾಣಿ ಕಾರಂತ್ , ಹಿರಿಯ ಸದಸ್ಯರಾದ ವಿಶ್ವನಾಥ ಶೆಟ್ಟಿ, ರಾಮಣ್ಣ ರೈ, ನವೀನ್ ಸಲ್ದಾನ, ಮೊಹಮ್ಮದ್ ಇಕ್ಬಾಲ್ ಮತ್ತು ಪ್ರತಿಭಾ ರೈ ಉಪಸ್ಥಿತರಿದ್ದರು.