ಬಂಟ್ವಾಳ: ಪ್ರತಿಷ್ಠಿತ ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಪುರಸಭೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಕಾಂಗ್ರೆಸ್ ನ ಮಹಮ್ಮದ್ ಶರೀಫ್ ಹಾಗೂ ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜಾ ಆಯ್ಕೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಗೋವಿಂದ ಪ್ರಭು ಕಾಂಗ್ರೆಸ್ ನಿಂದ ಮಹಮ್ಮದ್ ಶರೀಫ್ ಹಾಗೂ ಎಸ್ ಡಿ ಪಿ ಐ ಯ ಮೊನೀಶ್ ಅಲಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಮೀನಾಕ್ಷಿ ಗೌಡ ಹಾಗೂ ಕಾಂಗ್ರೆಸ್ ನಿಂದ ಜೆಸಿಂತಾ ಡಿಸೋಜಾ ನಾಮಪತ್ರ ಸಲ್ಲಿಸಿದ್ದರು.
ಅಂತಿಮ ಹಂತದಲ್ಲಿ ಮೊನೀಶ್ ಅಲಿ ನಾಮಪತ್ರ ಹಿಂಪಡೆದರು.
ತಲಾ 16 ಮತ ಪಡೆದ ಮಹಮ್ಮದ್ ಶರೀಫ್ ಅಧ್ಯಕ್ಷರಾಗಿ ಹಾಗೂ ಜರಸಿಂತಾ ಡಿಸೋಜಾ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.
ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ರಶ್ಮಿ ಎಸ್
ಆರ್. ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಸದ ನಳೀನ್ ಕುಮಾರ್, ಶಾಸಕ ರಾಜೇಶ್ ನಾಯ್ಕ್ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಉಪಸ್ಥಿತರಿದ್ದರು.