ಬಂಟ್ವಾಳ : ವಿದ್ಯಾರ್ಥಿಗಳು ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ಆ ಗುರಿಯನ್ನು ತಲುಪುವಲ್ಲಿ ತಮ್ಮ ಸಂಪೂರ್ಣ ಗಮನವನ್ನು ಕೇಂದ್ರೀಕರಿಸಿಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ ಹೇಳಿದರು.
ಅವರು ಆದಿತ್ಯವಾರ ಬಿ.ಸಿ.ರೋಡಿನ ರಾಜರಾಜೇಶ್ವರಿ ಕಾಂಪ್ಲೆಕ್ಸ್ನಲ್ಲಿರುವ ಯುನಿಕ್ ಎಜುಕೇರ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಅಧ್ಯಯನ ತಂತ್ರಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವರ್ತಮಾನ ಪತ್ರಿಕೆಗಳನ್ನು ಓದುವ ಮೂಲಕ ನಾವು ಆದಷ್ಟು ಪ್ರಸ್ತುತ ವಿಚಾರಗಳನ್ನು ತಿಳಿದುಕೊಳ್ಳಬೇಕು. ಆ ಮೂಲಕವಾಗಿ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಂಟ್ವಾಳ ಲಯನ್ಸ್ ಕ್ಲಬ್ ಕೃಷ್ಣಶ್ಯಾಮ್ ಉದ್ಘಾಟನೆ ಮಾಡಿ ಶುಭ ಹಾರೈಸಿದರು.
ಯುನಿಕ್ ಎಜುಕೇರ್ನ ಲಕ್ಷ್ಮಣ ಅಗ್ರಬೈಲ್ ಸ್ವಾಗತಿಸಿ, ಕವಿತಾ ಯಾದವ್ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕಿ ಭಾರತಿ ವಸಂತ ಕುಮಾರ್ ಅಣ್ಣಳಿಕೆ ನಿರೂಪಿಸಿದರು. ವೈಷ್ಣವಿ ಮತ್ತು ಧನ್ಯಾ ಪ್ರಾರ್ಥಿಸಿದರು. ವಕೀಲ ಯಶೋಧ, ಯಾದವ ಅಗ್ರಬೈಲ್, ದೇವದಾಸ್, ಡಾ. ಬಾಲಕೃಷ್ಣ ಕುಮಾರ್ ಸಹಕರಿಸಿದರು.