ಬಂಟ್ವಾಳ: ತಾಲೂಕು ಕುರಿಯಾಳ ಗ್ರಾಮದ ಕೇದ್ರಿಗದ್ದೆ ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ ಶೆಟ್ಟಿ ಇವರು ಸುಮಾರು 3 ಲಕ್ಷ ಅನುದಾನ ಒದಗಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ವಲೇರಿಯನ್ ಪಿಂಟೋ, ಗಣೇಶ ಶೆಟ್ಟಿ, ಕೇಶವ, ಶೇಖರ ಹಾಗೂ ಕುರಿಯಾಳ ಕೇದ್ರಿಗದ್ದೆ ನಾಗರಿಕರು ಉಪಸ್ಥಿತರಿದ್ದರು.