ಬಂಟ್ವಾಳ : ಜಿಲ್ಲಾ ಬಿಜೆಪಿ ವತಿಯಿಂದ ಗ್ರಾಮಸ್ವರಾಜ್ಯ ಸಮಾವೇಶ ಬಿ.ಸಿ.ರೋಡಿನ ಸ್ಪರ್ಶ ಸಭಾಂಗಣದಲ್ಲಿ ನಡೆಯಿತು.
ರಾಜ್ಯ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಮಾತನಾಡಿ ತುಷ್ಟೀಕರಣದ ರಾಜಕಾರಣ ಕಾಂಗ್ರೇಸ್ ಸಂಸ್ಕೃತಿಯಾಗಿದ್ದು, ಅಭಿವೃದ್ಧಿಯಲ್ಲೂ ಸೋತು ಮೂಲೆಗುಂಪಾಗಿದೆ, ಮುಂದಿನ ಚುನಾವಣೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿ ಪ್ರತೀ ಗ್ರಾಮಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಕಾರ್ಯಕರ್ತರ ಗೆಲುವಿಗಾಗಿ ತಕ್ಷಣದಿಂದಲೇ ಶ್ರಮಿಸಬೇಕಾಗಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಅಭಿಮಾನ, ಉತ್ಸಾಹ ರಾಜ್ಯಕ್ಕೆ ಮಾದರಿಯಾಗಿದೆ. ಸಂಸ್ಕೃತಿ ಹಾಗೂ ಆಚಾರ ವಿಚಾರಗಳನ್ನು ನಾಶಮಾಡುವುದು ಕಾಂಗ್ರೆಸ್ನ ಕೆಲಸವಾಗಿದ್ದರೆ, ಸಂಸ್ಕೃತಿ, ಧರ್ಮವನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಬಿಜೆಪಿಯ ಕಾರ್ಯಕರ್ತರ ಶ್ರಮ ಶ್ಲಾಘನೀಯ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಪಂಚಾಯತಿ ಚುನಾವಣೆ ಬಿಜೆಪಿ ಕಾರ್ಯಕರ್ತರ ಪಾಲಿಗೆ ಲೋಕಸಭಾ ಚುನಾವಣೆಯಷ್ಟೇ ಪ್ರಾಮುಖ್ಯತೆ ಪಡೆದಿದೆ. ಕಾಂಗ್ರೆಸ್ ತನ್ನ ವಿಚಾರ, ನಡೆದು ಬಂದ ದಾರಿ, ಕಾರ್ಯಕರ್ತರನ್ನು ಮರೆತದ್ದರಿಂದ ಸೋಲಿನ ದಾರಿ ಹಿಡಿದಿದ್ದು, ಬಿಜೆಪಿ ತನ್ನ ಕಾರ್ಯಕರ್ತರ ಶ್ರಮದಿಂದ ಜಗತ್ತಿನ ಅತ್ಯಂತ ದೊಡ್ಡ ಪಕ್ಷವಾಗಿ ಗುರುತಿಸಿಕೊಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ ಹಾಗೂ ನೈತಿಕ ಬೆಂಬಲದಿಂದ ಗ್ರಾಮಪಂಚಾಯತಿ ಅಧ್ಯಕ್ಷರು ಪ್ರಧಾನಿಯಷ್ಟೇ ಪವರ್ ಫುಲ್ ಆಗಲಿದ್ದಾರೆ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಕೋಲಾರ ಸಂಸದ ಮುನಿಸ್ವಾಮಿ, ಜಿಲ್ಲಾ
ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ. ಶಾಸಕರಾದ ರಾಜೇಶ್ ನಾಯ್ಕ್,
ಉಮಾನಾಥ ಕೋಟ್ಯಾನ್ ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ರಾಜ್ಯ ಮಹಿಳಾ ಮೋರ್ಛಾದ ಅಧ್ಯಕ್ಷೆ ಗೀತಾ ವಿವೇಕಾನಂದ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಗೋಪಾಲಕೃಷ್ಣ ಹೇರಳೆ, ಉದಯ ಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ್, ಸಂತೋಷ್ ಕುಮಾರ್ ಬೋಳಿಯಾರು, ಭರತೇಶ್, ರಾಜೇಶ್ ಕಾವೇರಿ, ಸುನಿಲ್ ಆಳ್ವಾ, ತಿಲಕ್ ರಾಜ್, ಚಂದ್ರಹಾಸ್ ಪಂಡಿತ್ ಹೌಸ್, ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು. ಸುನಿಲ್ ಆಳ್ವಾ ವಂದಿಸಿದರು. ಇದೇ ಸಂದರ್ಭ ಕೋವಿಡ್ ಹಿನ್ನೆಲೆಯಲ್ಲಿ ಮೃತರಾದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ತುಷ್ಟೀಕರಣದ ರಾಜಕಾರಣ ಕಾಂಗ್ರೇಸ್ ಸಂಸ್ಕೃತಿ: ಡಿಸಿಎಂ ಡಾ. ಡಾ.ಅಶ್ವಥ್ ನಾರಾಯಣ್