ಬಂಟ್ವಾಳ: ತುಂಬೆ ಗ್ರಾ.ಪಂ.ನ ಸಹಾಯಯಕ ಚುನಾವಣಾಧಿಕಾರಿ, ಪಂಚಾಯಿತಿ ಪಿಡಿಒ ಚಂದ್ರಾವತಿ ಅವರಿಗೆ ಅವಹೇಳನಕಾರಿಯಾಗಿ ನಿಂದಿಸಿ, ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ ವತಿಯಿಂದ ಸೋಮವಾರ ಸಂಜೆ ಬಂಟ್ವಾಳ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮುಂದಿನ ದಿನಗಳಲ್ಲಿ ಚುನಾವಣೆ ನಡೆಯುವ ಸಂದರ್ಭವೂ ಚುನಾವಣಾ ಕರ್ತವ್ಯದಲ್ಲಿರುವ ಎಲ್ಲಾ ನೌಕರರಿಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು, ಕಾರ್ಯದರ್ಶಿ ಸಂತೋಷ್ ಕುಮಾರ್, ರಾಜ್ಯ ಪರಿಷತ್ ಸದಸ್ಯ ಜೆ.ಜನಾರ್ದನ, ಉಪಾಧ್ಯಕ್ಷ ಮಂಜುನಾಥ್ ಕೆ.ಎಚ್., ಸದಸ್ಯರಾದ ಲಕ್ಷ್ಮಣ್, ಜಯರಾಮ್, ಸೀತರಾಮ ಮೊದಲಾದವರು ಉಪಸ್ಥಿತರಿದ್ದರು.