ಬಂಟ್ವಾಳ: ಕಾಂಗ್ರೆಸ್ ಮುಖಂಡ, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾವೆ, ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲು,ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಪಂಚಾಯತ್ ಚುನಾವಣೆಗೆ ಕೇವಲ ನಾಲ್ಕು ದಿನಗಳಿರುವಾಗಲೇ ಪಕ್ಷದ ನಾಯಕರ ವಲಸೆ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.