ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಷಷ್ಠಿ ಉತ್ಸವದ ಅಂಗವಾಗಿ ಗಣಪತಿ ಹೋಮ, ಬಿಂಬ ಶುದ್ದಿ, ಸಾನಿಧ್ಯ ಕಲಶ ಪೂಜಾ, ಕಲಶಾಭಿಷೇಕ, ಆಶ್ಲೇಷ ಬಲಿ ಹೋಮ, ಆಶ್ಲೇಷ ಬಲಿ ಪೂಜೆ ನಡೆಯಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಬಾಸ್ತ್ರಿತ್ತಾಯ, ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಪ್ರಮುಖರಾದ ದೇವಪ್ಪ ಮಡಿವಾಳ, ಚಿತ್ರ ಎಸ್., ಎಂ.ಕೆ. ಶಿವ, ಶ್ರೀನಿವಾಸ್ ನಾಯಕ್, ಪ್ರಸಾದ್ ಭಂಡಾರಿ, ಕೃಷ್ಣ ಭಟ್, ರಾಜೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.