ಬಂಟ್ವಾಳ: ಇಲ್ಲಿನ ಕಸ್ಬ ಗ್ರಾಮದ ಇಜ್ಜಾದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಸೋಮವಾರ ಬೆಳಿಗ್ಗೆ ನಡೆಯಿತು. ಕ್ಷೇತ್ರದ ತಂತ್ರಿಗಳಾದ ವಿದ್ಯಾಶಂಕರ ಭಟ್ ಬೋಳೂರು ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಸತ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ವಿವಿಧ ಧಾರ್ಮಿಕ ಪೂಜಾ ವಿಧಾನಗಳು ನಡೆದು ಋತ್ವಿಜರ ಮಂತ್ರಘೋಷಗಳೊಂದಿಗೆ , ಅಪಾರ ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಶ್ರೀ ದೇವರಿಗೆ ಕಲಶ ಅಭಿಷೇಕ ನಡೆಯಿತು. ಇದೇ ಸಂದರ್ಭ ನಾಗಶಿಲಾ ಪ್ರತಿಷ್ಠೆ, ಕಲಶಾಭಿಷೇಕ, ಪ್ರಸನ್ನ ಪೂಜೆ, ವ್ಯಾಘ್ರ ಚಾಮುಂಡಿ ಸಾಣಿಧ್ಯದಲ್ಲಿ ಕಲಶಾಭಿಷೇಕ, ಪರ್ವ ನಡೆಯಿತು.
ಬ್ರಹ್ಮಕಲಶಾಭಿಷೇಕದ ಅಂಗವಾಗಿ ಬೆಳಿಗ್ಗೆ ಗಣಪತಿ ಹವನ, ಪೀಠ ಪ್ರತಿಷ್ಠೆ, ಪ್ರತಿಷ್ಠಾಂಗ ಪ್ರಾಯಶ್ಚಿತ್ತ ದಾನಗಳು ನಡೆದವು. ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ಸ್ಥಳೀಯ ಭಜನಾ ತಂಡಗಳಿಂದ ಭಜನೆ ಹಾಗೂ ಹರಿಕಥಾ ಸಂಕೀರ್ತನೆ ನಡೆಯಿತು.