ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 110ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಶಿಬಿರವನ್ನು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಉದ್ಘಾಟಿಸಿದರು. ಅವರು ಮಾತನಾಡಿ ಒಂದು ಯುನಿಟ್ ರಕ್ತದಾನ ಮಾಡುವುದರಿಒಂದ ನಾಲ್ಕು ಮಂದಿಯ ಜೀವ ಉಳಿಸಲು ಸಾಧ್ಯವಿದೆ. ರಕ್ತದಾನದ ಬಗ್ಗೆ ಕೆಲವರಲ್ಲಿ ತಪ್ಪು ಅಭಿಪ್ರಾಯ ಇದೆ, ನಾವು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರನ್ನೂ ರಕ್ತದಾನಕ್ಕೆ ಪ್ರೇರೆಪಿಸವ ಕೆಲಸ ಮಾಡಬೇಕಾಗಿದೆ ಎಂದರು. ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕೃಷ್ಣಕುಮಾರ್ ಪೂಂಜ ಅವರು ಅತ್ಯುತ್ತಮವಾದ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ ಇದು ಅಭಿನಂದನೀಯ ಎಂದರು.
ರೋಟರಿ ಕ್ಲಬ್ನ ನಿಯೋಜಿತ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತಕ್ಕೆ ಪರ್ಯಾಯವಾದುದ್ದು ಬೇರಾವುದು ಇಲ್ಲ. ತುರ್ತು ಸಂದರ್ಬದಲ್ಲಿ ರಕ್ತದ ಅವಶ್ಯಕತೆ ಬಿದ್ದಾಗ ದಾನ ಮಾಡಿಯೇ ರಕ್ತವನ್ನು ನೀಡಬೇಕು ಹೊರತು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ ಎಂದರು. ಬೇಡಿಕೆಗೆ ಅನುಗುಣವಾಗಿ ರಕ್ತದಾನ ಶಿಬಿರವನ್ನು ನಡೆಸಲಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ರಕ್ತದ ಕೊರತೆಯಿದ್ದು ಇಂತಹ ಸಂದರ್ಭದಲ್ಲಿ ಸೇವಾಂಜಲಿ ಪ್ರತಿಷ್ಠಾನ ಹಾಗೂ ರೋಟರಿ ಕ್ಲಬ್ಗಳು ರಕ್ತದಾನ ಶಿಬಿರ ಆಯೋಜಿಸಿರುವುದು ಅಭಿನಂದನೀಯ ಎಂದರು. ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೋಕ್ತೇಸರ ಪದ್ಮರಾಜ್ ಬಲ್ಲಾಳ್ ಮಾವಂತೂರು, ರೋಟರಿ ಸದಸ್ಯ ಬಸ್ತಿ ಮಾಧವ ಶೆಣೈ
ಸೇವಾಂಜಲಿಯ ಅರ್ಕುಳ ಕಂಪ ಸದಾನಂದ ಆಳ್ವ, ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ಸಿ. ಜಿ. ಥೋಮಸ್ ಫರಂಗಿಪೇಟೆ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಜಯರಾಮ ಶೇಖ, ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ಪ್ರಸನ್ನ ವೇದಿಕೆಯಲಿ ಉಪಸ್ಥಿತರಿದ್ದರು. ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವೆಲೈಂಟಿನ್ ಡಿಸೋಜಾ, ಪೊಲೀಸ್ ವೃತ್ತನಿರೀಕ್ಷ ಟಿ. ಡಿ. ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ, ತಾ.ಪಂ. ಸದಸ್ಯ ಗಣೇಶ್ ಸುವರ್ಣ ತುಂಬೆ ಶಿಬಿರಕ್ಕೆ ಭೇಟಿ ನೀಡಿದರು. ಪ್ರಮುಖರಾದ ಕೊಡ್ಮಾನ್ ದೇವದಾಸ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಶ್ರೀಶೈಲ, ಪ್ರಶಾಂತ್, ವಿಕ್ರಂ ಬರ್ಕೆ, ಎಂ.ಕೆ. ಖಾದರ್, ಸುಕುಮಾರ್, ಪ್ರಕಾಶ್ ಬಾಳಿಗ, ರಾಜೇಶ್ ಕಬೇಲ, ಪ್ರವೀಣ್ ಕಬಲ ಪ್ರವೀಣ್ ಬಿ. ತುಂಬೆ, ಅರ್ಜುನ್ ಪೂಂಜಾ, ನೀಲನ್, ಪದ್ಮನಾಭ ಶೆಟ್ಟಿ ಪುಂಚಮೆ, ದಿನೇಶ್ ತುಂಬೆ, ಉಮಾ ಚಂದ್ರಶೇಖರ್, ಲಕ್ಷ್ಮಿ ಡಿ. ಶೆಟ್ಟಿ, ವಿದ್ಯಾ ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಸ್ವಾಗತಿಸಿ, ವಂದಿಸಿದರು. ಶಿಬಿರದಲ್ಲಿ ಒಟ್ಟು 102 ಯುನಿಟ್ ರಕ್ತ ಸಂಗ್ರಹವಾಯಿತು.