ಬಂಟ್ವಾಳ: ಅತಂತ್ರ ಸ್ಥಿತಿಯಲ್ಲಿದ್ದ ನೆಟ್ಲಮುಡ್ನೂರು ಗ್ರಾಮ ಪಂಚಾಯತಿನ ಪಕ್ಷೇತರ ಸದಸ್ಯ ಸತೀಶ್ ಪೂಜಾರಿ ಕೊಪ್ಪರಿಗೆ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶನಿವಾರ ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಬೆಳವಣಿಗೆಯಿಂದ ನೆಟ್ಲಮುಡ್ನೂರು ಗ್ರಾಮ ಪಂಚಾಯತಿನಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಖಚಿತ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿ ರಮಾನಾಥ ರಾಯಿ, ಜಿಲ್ಲಾ ಯುವ ಮೋರ್ಚಾದ ಸುದರ್ಶನ್ ಬಜ, ಪ್ರಮುಖರಾದ ಸನತ್ ಕುಮಾರ್ ರೈ, ತನಿಯಪ್ಪಗೌಡ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.