ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಭಾನುವಾರ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷೆ ಜಯಂತಿ ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
18 ಮಂದಿ ವಿದ್ಯಾರ್ಥಿಗಳಿಗೆ ನಿರಂತರ ವಿದ್ಯಾರ್ಥಿ ವೇತನ, 9 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸೇರಿದಂತೆ ಸುಮಾರು ೪೮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯ್ಯೂರ್ ಉಳ್ಳಾಲ್, ಬಂಟ್ವಾಳ ಸರಕಾರಿ ಆಸ್ಪತ್ರೆಯ ಎಲುಬು ತಜ್ಞ ಡಾ| ಚೇತನ್ ರಾಜ್.
ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪುರಂದರ ಸಜೀಪ ಭಾಗವಹಿಸಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಸಾಲಿಯನ್, ಮಹಿಳಾ ಘಟಕದ ಅಧ್ಯಕ್ಷೆ ನಮಿತಾ ಉಮೇಶ್, ಸೇವಾ ದಳಪತಿ ನಿಶಾಂತ್ ಎಂ. ಬಿ. ವೇದಿಕೆಯ್ಲಲಿದ್ದರು. ಉಪಾಧ್ಯಕ್ಷ ದಾಮೋದರ ಏರ್ಯ ಸ್ವಾಗತಿಸಿ, ಕೋಶಾಧಿಕಾರಿ ಸುಕುಮಾರ್ ಬಂಟ್ವಾಳ ವಂದಿಸಿದರು. ರಾಧಕೃಷ್ಣ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.