ಬಂಟ್ವಾಳ: ರಾಯಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಯವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷ ಶೇಖರ ಅಂಚನ್, ಪ್ರಮುಖರಾದ ಪ್ರಕಾಶ್ ಅಂಚನ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ವಸಂತ ಕುಮಾರ್ ಅಣ್ಣಳಿಕೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.