ಬಂಟ್ವಾಳ: ರಾಜ್ಯದ ಮಾದರಿ ಶಾಲೆ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಬೆಳಿಗ್ಗೆ ಗುರುಪುರದ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಭೇಟಿ ನೀಡಿದರು. ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ನ ಪ್ರಯತ್ನದ ಫಲವಾಗಿ ಅಭಿವೃದ್ದಿಗೊಂಡಿರುವ ದಡ್ಡಲಕಾಡು ಸರಕಾರಿ ಶಾಲೆ ಮುಂದಿನ ದಿನಗಳಲ್ಲಿ ದೇಶಕ್ಕೆ ಮಾದರಿಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಯೋಗೀಶ್ ಕುಲಾಲ್, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ ಪಿಲಿಂಗಾಲು, ಪೂವಪ್ಪ ಮೆಂಡನ್, ಪ್ರಮುಖರಾದ ರಾಮದಾಸ ಬಂಟ್ವಾಳ್, ಜನಾರ್ದನ ಕುಲಾಲ್, ಜಯರಾಜ್ ರಾಮನಗರ, ರಾಮಚಂದ್ರ ಶೆಟ್ಟಿ ದಂಡೆ, ಕೊರಗಪ್ಪ ಪೂಜಾರಿ ದಡ್ಡಲಕಾಡು, ಬಾಲಕೃಷ್ಣ ಚೆರ್ಕಳ ಮೊದಲಾದವರು ಉಪಸ್ಥಿತರಿದ್ದರು.
ದಡ್ಡಲಕಾಡು ಸರಕಾರಿ ಶಾಲೆಗೆ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಭೇಟಿ
