ಬಂಟ್ವಾಳ: ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ದಡ್ಡಲಕಾಡು ಸರಕಾರಿ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಸಮರ್ಪಿಸಿದರು. ಶಾಲಾ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ, ತತ್ವಾದರ್ಶಗಳು ಸಮಾಜದಲ್ಲಿ ಅನುಷ್ಠಾನಗೊಳ್ಳಬೇಕು. ಸಮಾಜದ ಪರಿವರ್ತನೆಯ ಹರಿಕಾರರಾಗಿರವ ಅಂಬೇಡ್ಕರ್ ಅವರ ಮೌಲ್ಯಯುತ ಜೀವನ ನಮಗೆಲ್ಲರಿಗೂ ಆದರ್ಶವಾಗಬೇಕು ಎಂದರು. ದಡ್ಡಲಕಾಡು ಶಾಲೆಯ ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ ಶುಭಾಶಯ ಕೋರಿದರು. ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಪ್ರಾಥಮಿಕ ಶಾಲಾ ವಿಭಾಗದ ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಪಂಚಾಯತಿ ಸದಸ್ಯ ಪೂವಪ್ಪ ಮೆಂಡನ್, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಶೇಖರ್ ಅಂಚನ್, ಬಾಲಕೃಷ್ಣ ಜಿ, ನವೀನ್ ಸೇಸಗುರಿ, ಮಹೇಶ್ ಡೆಚ್ಚಾರ್, ಅಶ್ವಥ್ ಡೆಚ್ಚಾರ್, ಪ್ರವೀಣ್ ಅಲಂಗಾರು, ಸಂತೋಷ್ ದಡ್ಡಲಕಾಡು, ದಿನೇಶ್ ಪೂಜಾರಿ ಕರೆಂಕಿ, ನವೀನ್ ಕೊಂಬರಬೈಲು ಮತ್ತಿತರರು ಉಪಸ್ಥಿತರಿದ್ದರು.