ಬಂಟ್ವಾಳ: ಇಲ್ಲಿನ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಮನೋಹರ್ ನೇರಂಬೋಳು ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಕಾರ್ಮಿಕ ಘಟಕದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಅನುಮೋದನೆ ಹಾಗೂ ಬಂಟ್ವಾಳ ಬ್ಲಾಕ್ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಈ ಆಯ್ಕೆ ಮಾಡಿದ್ದಾರೆ.