ಬಂಟ್ವಾಳ: ಪ್ರತಿಷ್ಠಿತ ಸೇವಾ ಸಂಸ್ಥೆಯಾಗಿರುವ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 18 ರಂದು ಭಾನುವಾರ ಸಂಜೆ 5ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ.
ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಶಾನ್ಫತ್ ಶರೀಫ್, ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಕೋಶಾಧಿಕಾರಿಯಾಗಿ ಸುರೇಶ್ ಸಾಲ್ಯಾನ್ ಮತ್ತವರ ತಂಡ ಅಧಿಕಾರ ಸ್ವೀಕರಿಸಲಿದೆ. ರೋಟರಿ ಜಿಲ್ಲೆಯ ಪೂರ್ವ ಗವರ್ನರ್ ಅಭಿನಂದನ್ ಎ. ಶೆಟ್ಟಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಸಹಾಯಕ ಗವರ್ನರ್ ಜಿ. ಸುರೇಂದ್ರ ಕಿಣಿ, ವಲಯ ಕಾರ್ಯದರ್ಶಿ ಜಯರಾಮ ರೈ, ವಲಯ ಸೇನಾನಿ ಅವಿಲ್ ಮಿನೇಜಸ್, ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಭಾಗವಹಿಸುವರು. ಸರಕಾರದ ಮಾರ್ಗಸೂಚಿಯಂತೆ ಕೋವಿಡ್ ನಿಯಾಮಾವಳಿಗಳನ್ನು ಅನುಸರಿಸಿಕೊಂಡು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಸಕರಾತ್ಮಕ ಆರೋಗ್ಯ, ಪ್ರಥಮ ಚಿಕಿತ್ಸೆ ತರಬೇತಿ, ಸಂಚಾರಿ ನಿಯಮಗಳ ಜಾಗೃತಿ, ಕಲಿಕೆ ಈ ವರ್ಷದ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆಗಳಾಗಿದ್ದು ಕ್ಲಬ್ನ ಸದಸ್ಯರ ಸಹಕಾರದೊಂದಿಗೆ ಈ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಲಿದ್ದು ಇದರ ಜೊತೆಗೆ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡುವುದಾಗಿ ನೂತನ ಅಧ್ಯಕ್ಷ ಶಾನ್ಫತ್ ಶರೀಫ್ ತಿಳಿಸಿದ್ದಾರೆ.