ಬಂಟ್ವಾಳ: ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ವತಿಯಿಂದ ನಿವೃತ್ತ ಯೋಧ ಹಾಗೂ ಕ್ಲಬ್ ಸದಸ್ಯ ಐವನ್ ಮಿನೇಜಸ್ ಅವರನ್ನು ಕ್ಲಬ್ನ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಅಧ್ಯಕ್ಷ ರಾಘವೇಂದ್ರ ಭಟ್, ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ಪೂರ್ವ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ಸ್ಥಾಪಾಕಾಧ್ಯಕ್ಷ ಅವಿಲ್ ಮಿನೇಜಸ್ ಉಪಸ್ಥಿತರಿದ್ದರು. ಇದೇ ಸಂದರ್ಭ ಪತ್ರಿಕಾ ದಿನಾಚರಣೆಯ ಅಂಗವಾಗಿ ಪತ್ರಕರ್ತರಾದ ರತ್ನದೇವ್ ಪುಂಜಾಲಕಟ್ಟೆ, ಸಂದೀಪ್ ಸಾಲ್ಯಾನ್, ಮೋಹನ್ ಕೆ. ಶ್ರೀಯಾನ್ ಅವರನ್ನು ಸನ್ಮಾನಿಸಲಾಯಿತು.