ಬಂಟ್ವಾಳ: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 114ನೇ ರಕ್ತದಾನ ಶಿಬಿರ ಆ. 1ರಂದು ಭಾನುವಾರ ಸೇವಾಂಜಲಿ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್, ಲಯನ್ಸ್ ಜಿಲ್ಲಾ ಗವರ್ನರ್ ವಸಂತ ಕುಮಾರ್ ಶೆಟ್ಟಿ, ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಭಾಗವಹಿಸಲಿದ್ದಾರೆ ಎಂದು ಸೇವಾಂಜಲಿಯ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ತಿಳಿಸಿದ್ದಾರೆ.