ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ನಾಗೇಶ್ ಎಂ. ಆಯ್ಕೆಯಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಸಂಘದ ಅಧ್ಯಕ್ಷ ಈಶ್ವರ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಾರ್ಯದರ್ಶಿಯಾಗಿ ಯಾದೇಶ್ ತುಂಬೆ, ಕೋಶಾಧಿಕಾರಿ ಯಾಗಿ ತುಳಸಿ ಆರ್. ಆಯ್ಕೆಯಾದರು. ಮುಖ್ಯ ಅಥಿತಿಗಳಾಗಿ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲಿಯನ್, ಜಿಲ್ಲಾಧ್ಯಕ್ಷರಾದ ಪ್ರಜ್ವಲ್ ಕುಮಾರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಎಮ್. ವರದಿ ವಾಚಿಸಿದರು. ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಯಾದೇಶ್ ತುಂಬೆ ಲೆಕ್ಕ ಪತ್ರ ವಾಚಿಸಿದರು. ವಸಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.