ಬಂಟ್ವಾಳ: ನೂತನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಆಯ್ಕೆಯಾದ ಬಿ.ಸಿ.ನಾಗೇಶ್ ಅವರಿಗೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅಭಿನಂದನೆ ಸಲ್ಲಿಸಿದ್ದಾರೆ.
ಬಿ.ಸಿ. ನಾಗೇಶ್ ಅವರು ಶಿಕ್ಷಣ ಸಚಿವರಾಗಿ ಆಯ್ಕೆಯಾಗಿರುವ ಸುದ್ದಿ ತಿಳಿಯುತ್ತಿದತೆಯೇ ದೂರವಾಣಿ ಮೂಲಕ ಸಂಪರ್ಕಿಸಿದ ಪ್ರಕಾಶ್ ಅಂಚನ್ ಶುಭಾಶಯ ಕೋರಿದರು. ಕಳೆದ ಒಂದೂವರೆ ವರ್ಷದಿಂದ ಕೋವಿಡ್ನಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯಮಾನ ಸ್ಥಿತಿಗೆ ತಲುಪಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಲೆ ಆರಂಭಿಸುವಂತೆ ಅವರು ವಿನಂತಿಸಿ ಕೊಂಡರು.
ಈ ಹಿಂದೆ ಒಂದೇ ದೇಶ ಒಂದೇ ಶಿಕ್ಷಣ ಜಾರಿಗಾಗಿ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಬೆಂಗಳೂರು ಚಲೋ ರಥಯಾತ್ರೆ ಕೈಗೊಂಡ ಸಂದರ್ಭ ರಥಯಾತ್ರೆ ತಿಪಟೂರು ತಲುಪಿದ ವೇಳೆ ಬಿ.ಸಿ. ನಾಗೇಶ್ ಅವರು ಅಪಾರ ಶಿಕ್ಷಣ ಪ್ರೇಮಿಗಳೊಂದಿಗೆ ಅದ್ದೂರಿ ಸ್ವಾಗತ ಕೋರಿದ್ದರು. ಅಲ್ಲದೆ ಸರಕಾರಿ ಶಾಲೆ ಉಳಿವಿಗಾಗಿ ಹಮ್ಮಿಕೊಂಡಿರುವ ಈ ಹೋರಾಟಕ್ಕೆ ಯಾವತ್ತೂ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಇದೀಗ ಬಿ.ಸಿ. ನಾಗೇಶ್ ಅವರೇ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾಗಿ ಆಯ್ಕೆಯಾಗಿರುವುದು ಹರ್ಷ ತಂದಿದೆ, ಸರಕಾರಿ ಶಾಲೆ ಉಳಿಸುವ ನಮ್ಮ ಹೋರಾಟಕ್ಕೂ ಬಲ ಬರಲಿದೆ ಎಂದು ಪ್ರಕಾಶ್ ಅಂಚನ್ ತಿಳಿಸಿದ್ದಾರೆ.