ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಪುದು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ ಸ್ತ್ರೀಯರಿಗೆ ಪೌಷ್ಠಿಕ ಆಹಾರದ ಕಿಟ್ಗಳನ್ನು ವಿತರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಶನ್ಫತ್ ಶರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಖಜಾಂಚಿ ಸುರೇಶ್ ಸಾಲಿಯಾನ್, ಸದಸ್ಯರಾದ ಜಯರಾಜ್ ಎಸ್ ಬಂಗೇರ, ಕಿಶೋರ್ ಕುಮಾರ್, ನೌಶೀರ್, ಉಮೇಶ್ ಮೂಲ್ಯ, ಆನ್ಸ್ ಕ್ಲಬ್ ಅಧ್ಯಕ್ಷೆ ಸವಿತಾ ಶೆಟ್ಟಿ, ಯಾಸ್ಮಿನ್ ಅಹಮದ್, ನೌಶಿನ್ ಭಾನು, ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.