ಬಂಟ್ವಾಳ: ಇಲ್ಲಿನ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ರವರ 161 ನೇ ಜನ್ಮ ದಿನಾಚರಣೆ ಮತ್ತು ಇಂಜಿನಿಯರ್ಸ್ ದಿನಾಚರಣೆ ಹಾಗೂ 2020-21 ನೇ ಸಾಲಿನ ಭಾರತ ರತ್ನ ಸರ್. ಎಂ.ವಿ. ಪ್ರಶಸ್ತಿ ಪ್ರದಾನ ಹಾಗೂ ಯುವ ತಾಂತ್ರಿಕ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ. ಸೆ.30 ರಂದು ಬಿ.ಸಿ.ರೋಡಿನ ಪದ್ಮಕಾಂಪ್ಲೆಕ್ಸ್ನ ಸಭಾಂಗಣದಲ್ಲಿ ನಡೆಯಲಿದೆ.
ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇಲ್ಲಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಶಾಮರಾಜ್ ಎಸ್. ಕಾರ್ಯಕ್ರಮ ಉದ್ಘಾಟಿಸುವರು. ಬಂಟ್ವಾಳ ತಾ| ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಅಧ್ಯಕ್ಷ ಮ್ಯಾಥ್ಯೂ ಫ್ರಾನ್ಸಿಸ್ ಡಿಕುನ್ನಾ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪಾಲಿಟೆಕ್ನಿಕ್ ಉಪನ್ಯಾಸಕ ನಂದೀಶ್ ಎಂ.ಕೆ. ಭಾಗವಹಿಸುವರು. ಜಲ ಸಂಪನ್ಮೂಲ ಇಲಾಖೆಯ ಅಭಿಯಂತರ ಡಾ. ಆನಂದ ಬಂಜನ್ ಅವರಿಗೆ ಉಪನ್ಯಾಸಕ ಚಿತ್ರಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.