ಬಂಟ್ವಾಳ: ಮಹಾತ್ಮಗಾಂಧಿ ಜಯಂತಿ, ಮಾಜಿ ಪ್ರಧಾನಿ ಲಾಲ್ಬಹದ್ದೂರು ಶಾಸ್ತ್ರಿ ಜಯಂತಿ ಹಾಗೂ ಪ್ರಧಾನ ನರೇಂದ್ರ ಮೋದಿಯವರ ೭೧ನೇ ಜನ್ಮದಿನದ ಪ್ರಯುಕ್ತ ಭಾನುವಾರ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು.
ಶಾಲಾ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು ಶಾಲೆ ಪರಿಸರದಲ್ಲಿ ಬೆಳೆದಿದ್ದ ಕಳೆಗಿಡಗಳನ್ನು ತೆರವು ಮಾಡಿ ಶಾಲಾ ಆವರಣವನ್ನು ಅಂದಗೊಳಿಸಿದರು.
ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಪ್ರಧಾನಿಯವರ ಸ್ವಚ್ಛತೆಯ ಕಲ್ಪನೆಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಕಳೆದ 20 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಹಲವಾರು ಉಪಯುಕ್ತ ಯೋಜನೆಗಳನ್ನು ದೇಶಕ್ಕೆ ನೀಡಿದ್ದಾರೆ. ಅವರ ಅಧಿಕಾರವಧಿಯಲ್ಲಿ ಸಮಾನ ಹಾಗೂ ಏಕರೂಪದ ಶಿಕ್ಷಣ ವ್ಯವಸ್ಥೆ ಆದಷ್ಟು ಬೇಗ ಜಾರಿಯಾಗಲಿ, ಸರಕಾರಿ ಶಾಲೆಗಳು ಹಾಗೂ ಬಡವಿದ್ಯಾರ್ಥಿಗಳ ಏಳಿಗೆಗೆ ಇನ್ನಷ್ಟು ಯೋಜನೆಗಳನ್ನು ಜಾರಿಗೊಳಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶಿಸಿದರು. ಈ ಸಂಧರ್ಭ ಪ್ರ್ರೌಢಶಾಲಾ ವಿಭಾಗದ ಶಾಲಾಭಿವೃದ್ದಿ ಸಮಿತಿ ಕಾರ್ಯಧ್ಯಕ್ಷ ಪುರುಷೋತ್ತಮ ಅಂಚನ್, ಪ್ರಾಥಮಿಕ ವಿಭಾಗದ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಶಾಲಾ ಮುಖ್ಯೋಪಾಧ್ಯರಾದ ಅನಿತಾ, ಮೌರೀಸ್ ಡಿಸೋಜಾ, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್, ಪಂಚಾಯತಿ ಸದಸ್ಯ ಪೂವಪ್ಪ ಮೆಂಡನ್, ಕೆಎಸ್ಟಿಎ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ನಾಗೇಶ್ ಎಂ., ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಸದಸ್ಯರಾದ ನವೀನ್ ಗೌಡ ಸೇಸಗುರಿ, ಅಶ್ವತ್ ಡೆಚ್ಚಾರ್, ಪ್ರವೀಣ್ ಗೌಡ, ಕೃಷ್ಣಪ್ಪ ಪೂಜಾರಿ, ಯಶೋಧರ, ಯಶವಂತ, ಹರೀಶ್ ನಾಯ್ಕ್ ನೆಕ್ಕರೆ, ಪ್ರಶಾಂತ್, ದಿನೇಶ್, ಸುಂದರಗೌಡ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಅಂಚೆ ಪತ್ರ ಬರೆಯಲಾಯಿತು.