ಬಂಟ್ವಾಳ: ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ನಂದಾವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆಯಿತು.ಸಜೀಪ ಮಾಗಣೆ ತಂತ್ರಿ. ಎಂ. ಸುಬ್ರಹ್ಮಣ್ಯ ಭಟ್ ಮಾತನಾಡಿ ದೇವರ ಸೇವೆ ಮಾಡುವ ಅವಕಾಶ ನಮಗೆ ಒದಗಿ ಬಂದಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಜೊತೆಗೂಡಿ ಈ ಪುಣ್ಯ ಕಾರ್ಯದಲ್ಲಿ ಭಾಗಿಗಳಗೋಣ ಎಂದು ತಿಳಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಜಿ.ಶೆಟ್ಟಿ ದಲಂದಿಲ, ಕಾರ್ಯಧ್ಯಕ್ಷ ಕೆ. ವಿಶ್ವನಾಥ ಆಳ್ವ ಕಾಂತಾಡಿಗುತ್ತು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ,
ಪ್ರಧಾನ ಅರ್ಚಕ ವೇ.ಮೂ.ಮಹೇಶ್ ಭಟ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಮ್ ಪ್ರಸಾದ್ ಪೂಂಜ ಬರಂಗರೆ, ದೇವಾಡಿಗ ಸಮಾಜ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣ ಸಮಿತಿ ಅಧ್ಯಕ್ಷ ರಾಮದಾಸ್ ಬಂಟ್ವಾಳ, ಸ್ವಾಗತ ಸಮಿತಿ ಸದಸ್ಯ ಮುಳ್ಳುಂಜ ವೆಂಕಟೇಶ್ವರ ಭಟ್ಟ ಹಾಗೂ ವಿವಿಧ ಉಪ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.
ಅಭಿವೃದ್ಧಿ ಸಮಿತಿ ಸದಸ್ಯ ದಾಮೋದರ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಎನ್. ಶಿವಶಂಕರ್ ವಂದಿಸಿದರು.