ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.15ರಿಂದ ಫೆ.24ರವರೆಗೆ ನವೀಕರಣ ಅಷ್ಟ ಬಂದ ಬ್ರಹ್ಮಕಲಶೋತ್ಸವ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಶುಕ್ರವಾರ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ವಿವೇಕ ಚೈತನ್ಯನಂದ ಸ್ವಾಮೀಜಿ ಕಾರ್ಯಾಲಯ ಉದ್ಘಾಟಿಸಿ ವಿಜ್ಙಾಪನಾ ಪತ್ರ ಬಿಡುಗಡೆಗೊಳಿಸಿದರು.
ಅವರು ಆಶೀರ್ವಚ ನೀಡಿ ದಿವ್ಯಶಕ್ತಿ ಕೇಂದೃಕೃತ ಆಗಬೇಕಾದರೆ ಭಕ್ತರೆಲ್ಲರೂ ದೇವಸ್ಥಾನವೆಂಬ ಸಾನಿಧ್ಯದಲ್ಲಿ ಒಟ್ಟಾಗಿ ಪ್ರಾರ್ಥನೆ ಮಾಡಿದಾಗ ಅಲ್ಲಿ ಶಕ್ತಿ ಆವಿರ್ಭವವಾಗುತ್ತದೆ ಎಂದು ತಿಳಿಸಿದರು. ದೇವರ ಅನುಗ್ರಹದಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಹಣದ ಸಮಸ್ಯೆ ಬರುವುದಿಲ್ಲ. ಎಲ್ಲರೂ ಭಕ್ತಿಯಿಂದ ಒಗ್ಗಟ್ಟಾಗಿ, ಸಂಘಟಿತರಾಗಿ ಈ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗೋಣ. ಮನಸಿಟ್ಟು ಕೆಲಸ ಮಾಡಿದಾಗ ಯಶಸ್ಸು ಸಿಗಲಿದೆ ಎಂದರು.
ವೇದಿಕೆಯಲ್ಲಿ ಜ್ಞಾನ ಪ್ರಧಾನನಂದ ಸ್ವಾಮೀಜಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಚ ಸದಾನಂದ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ. ಕೋಶಾಧಿಕಾರಿ ಕವಿರಾಜ್ ಚಂದ್ರಿಕೆ, ಅರ್ಚಕ ರಾಧಕೃಷ್ಣ ಕಡಂಬಳಿತ್ತಾಯ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ತಾರಾನಾಥ ಕೊಟ್ಟಾರಿ ಸ್ವಾಗತಿಸಿದರು. ಗೌರವಾಧ್ಯಕ್ಷ ನವೀನ್ಚಂದ್ರ ಶೆಟ್ಟಿ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿದರು. ವ್ಯವಸ್ಫಾಪನ ಸಮಿತಿ ಕಾರ್ಯದರ್ಶಿ ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯ ಸತೀಶ್ ಶೆಟ್ಟಿ ಮೊಡಂಕಾಪು ವಂದಿಸಿದರು.