ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಆಶ್ರಯದಲ್ಲಿ ಜ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರಿಂದ ಕಣ್ಣು, ದಂತ, ವೈದ್ಯಕೀಯ ಶಿಬಿರ ಹಾಗೂ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಮಂಗಳವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.
ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ
ಮುಖ್ಯ ಅತಿಥಿ ಮೇರಮಜಲು ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಕರ್ಕೆರಾ ಮಾತನಾಡಿ
ಮಂಗಳೂರಿನ ಅಂಬಾ ಭವಾನಿ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ., ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ಕಾರ್ಯನಿರ್ವಾಹಣಾಧಿಕಾರಿ ಪ್ರೇಮರಾಜ್ ಭಂಡಾರಿ, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇದರ ಕಾರ್ಯ ನಿರ್ವಾಹಣಾಧಿಕಾರಿ ಧರ್ಮಪಾಲ್ ಭಂಡಾರಿ, ತಾ.ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ಜಯರಾಂ ಶೇಖ, ಜಯರಾಜ್ ಕರ್ಕೆರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಮುಖರಾದ ಪುಂಚಮೆ ಪದ್ಮನಾಭ ಶೆಟ್ಟಿ, ಎಂ.ಕೆ. ಖಾದರ್, ಪ್ರಕಾಶ್ ಕೆ., ಪ್ರಶಾಂತ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು. ಟ್ರಸ್ಟಿಗಳಾದ ತಾರಾನಾಥ ಕೊಟ್ಟಾರಿ ತೇವು ಪ್ರಾಸ್ತವಿಕವಾಗಿ ಮಾತನಾಡಿದರು, ದೇವದಾಸ್ ಶೆಟ್ಟಿ ಕೊಡ್ಮಾಣ್ ಕಾರ್ಯಕ್ರಮ ನಿರೂಪಿಸಿದರು