
ಬಂಟ್ವಾಳ: ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ಕಲಿಕಾ ಚೇತರಿಕೆ ಕಾರ್ಯಗಾರ ಶುಕ್ರವಾರ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕಿಯರಾದ , ಸುಧಾ, ಸುಜಾತ, ಪ್ರತಿಮಾ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ವ್ಯಕ್ತಿಗಳಾದ, ವೆಂಕಟ್ರಮಣ ಆಚಾರ್, ಲಕ್ಷ್ಮಣ್, ಶರತ್ ಚೌಟ, ರಂಜಿತ, ಪುಷ್ಪಲತಾ, ಸುಬ್ರಹ್ಮಣ್ಯ ಪ್ರಕಾಶ್, ಪ್ರವೀಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕಿನ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಭೋದಿಸುವ ಸುಮಾರು 124 ಮಂದಿ ಶಿಕ್ಷಕರು ಭಾಗವಹಿಸಿದ್ದರು. ಉಪಪ್ರಾಂಶುಪಾಲೆ ಜಯಾಲಕ್ಷ್ಮೀ ಪಿ.ಎನ್. ಸ್ವಾಗತಿಸಿದರು. ಸಹಶಿಕ್ಷಕರಾದ ಸುಲೋಚನಾ ವಂದಿಸಿದರು, ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

