ಬಂಟ್ವಾಳ: ಬ್ರಹ್ಮರಕೂಟ್ಲು ಶ್ರೀ ಮೂಕಾಂಬಿಕ ಶ್ರೀ ರಾಮ ಭಜನಾ ಮಂದಿರ ಸುವರ್ಣ ಮಹೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಭಾನುವಾರ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.
ಮಂದಿರದ ಗೌರವಾಧ್ಯಕ್ಷ, ಉದ್ಯಮಿ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಶಶಿಧರ್ ಬ್ರಹ್ಮರಕೂಟ್ಲು ಮಾತನಾಡಿ 1972ರಲ್ಲಿ ಈ ಮಂದಿರ ಆರಂಭಗೊಂಡು 1982ರಲ್ಲಿ ಇಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ನಗರ ಭಜನೆ ಹಾಗೂ ಭಕ್ತರ ಸಹಕಾರದಿಂದ ಮಂದಿರ ಆರ್ಥಿಕ ಬಲವನ್ನು ಪಡೆದುಕೊಂಡು ಹಲವು ಮಂದಿ ಆಡಳಿತ ಸಮಿತಿ ಅಧ್ಯಕ್ಷರಾಗಿ, ಪದಾಧಿಕಾರಿಗಳಾಗಿ ಮಂದಿರವನ್ನು ಮುನ್ನಡೆಸಿಕೊಂಡು ಬಂದಿದ್ದು ಪ್ರಸ್ತುತ ಮಂದಿರ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ ಎಂದು ತಿಳಿಸಿದರು. ಜನರ ಒಗಟ್ಟು ಹಾಗೂ ಸಹಕಾರ ಮನೋಭಾವದಿಂದಾಗಿ ಜಿಲ್ಲೆಯಲ್ಲಿಯೇ ಅತ್ಯಂತ ಸುಸಜ್ಜಿತ ಹಾಗೂ ದೊಡ್ಡದಾದ ಭಜನಾ ಮಂದಿರ ಇಲ್ಲಿ ನಿರ್ಮಾಣಗೊಳ್ಳಲು ಸಾಧ್ಯವಾಗಿದೆ ಎಂದರು.
ಸುವರ್ಣ ಮಹೋತ್ಸವ ಉತ್ಸವ ಸಮಿತಿ ಕಾರ್ಯಧ್ಯಕ್ಷ ಉಮೇಶ್ ರೆಂಜೋಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಮಾಹಿತಿ ನೀಡಿದರು. ಈ ಸಂದರ್ಭ ಪ್ರಮುಖರಾದ ಜ್ಯೋತೀಂದ್ರ ಪ್ರಸಾದ್ ಶೆಟ್ಟಿ ಮುಂಡಾಜೆಗುತ್ತು, ಸದಾಶಿವ ಡಿ ತುಂಬೆ, ದೇವಂದಬೆಟ್ಟು ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಶ್ರೀ ಶೈಲ, ಅನಿಲ್ ಪಂಡಿತ್ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕುಲಾಲ್ ಗೋವಿಂತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುವರ್ಣ ಮಹೋತ್ಸವ ಉತ್ಸವ ಸಮಿತಿ ಅಧ್ಯಕ್ಷ ರೋಷನ್ ರೈ ಪಚ್ಚಿನಡ್ಕ ವಂದಿಸಿದರು. ಕೋಶಾಧಿಕಾರಿ ನವೀನ್ ಪಲ್ಲ ಕಾರ್ಯಕ್ರಮ ನಿರೂಪಿಸಿದರು. ಊರಿನ ಪ್ರಮುಖರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.