ಬಂಟ್ವಾಳ: ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ವತಿಯಿಂದ ಅನಾರೋಗ್ಯದ ಬಳಲುತ್ತಿದ್ದ ಇಬ್ಬರು ವ್ಯಕ್ತಿಗಳ ಚಿಕಿತ್ಸೆಗಾಗಿ ತಲಾ ೧೦ ಸಾವಿರ ರೂಪಾಯಿಯ ಆರ್ಥಿಕ ನೆರವಿನ ಚೆಕ್ಕನ್ನು ಭಾನುವಾರ ಮೊಗರ್ನಾಡುವಿನ ಟ್ರಸ್ಟ್ನ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ನರಿಕೊಂಬು ಗ್ರಾಮದ ನಾಟಿ ನಿವಾಸಿ ಮಂಗಳ ಅಶೋಕ್ ಪೂಜಾರಿ ಪುತ್ರ ಎರಡು ವರ್ಷ ಪ್ರಾಯದ ಬಾಲಕ ಧ್ರುವೀಶ್ ನರ ಮತ್ತು ಕಣ್ಣಿನ ಸಮಸ್ಯೆ ಹಾಗೂ ಲಕ್ಷ್ಮಣ್ ಪೂಜಾರಿ ಎಂಬವರ ಪತ್ನಿ ಭಾರತಿ ಎಂಬವರು ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಆರ್ಥಿಕ ನೆರವನ್ನು ನೀಡಲಾಗಿದೆ. ಈ ಸಂದರ್ಭ ಟ್ರಸ್ಟ್ ಅಧ್ಯಕ್ಷರು, ಟ್ರಸ್ಟಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.