ಬಂಟ್ವಾಳ: ಪಾಣೆಮಂಗಳೂರು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ ಸುವರ್ಣ ಸಾನದ ಮನೆ ಎಂಬವರ ಶವ ಗುರುವಾರ ಬೆಳಗ್ಗೆ ಪತ್ತೆಯಾಗಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಜಿಪನಡು ಸಾನದಮನೆ ನಿವಾಸಿ ಹಿಂದುಪರ ಸಂಘಟನೆಗಳ ಮುಖಂಡ ರಾಜೇಶ್ ಸುವರ್ಣ ಎಂಬವರ ಶವ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸೇತುವೆ ಬಳಿ ರಾತ್ರಿ ದ್ವಿಚಕ್ರ ವಾಹನವೊಂದು ಕಂಡುಬಂದಿದ್ದು, ಅದನ್ನು ಗಮನಿಸಿದ ಪೊಲೀಸರು ಅಗ್ನಿಶಾಮಕದಳದ ಹಾಗೂ ಸ್ಥಳೀಯರ ಸಹಾಯದಿಂದ ಹುಡುಕಾಟ ನಡೆಸಿದರು. ಈ ಸಂದರ್ಭ ನದಿಯಲ್ಲಿ ಶವ ಪತ್ತೆಯಾಗಿದೆ. ಘಟನೆಗೆ ಕಾರಣವಿನ್ನೂ ಗೊತ್ತಾಗಬೇಕಿದ್ದು, ತನಿಖೆ ಸಾಗಿದೆ. ಸಾವಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ಊಹಾಪೋಹಗಳು ಹರಿಡಾಡುತ್ತಿದು ಸಂಶಯ ವ್ಯಕ್ತವಾಗಿದೆ. ಪೊಲೀಸರ ತನಿಖೆಯಿಂದ ನಿಜಾಂಶ ತಿಳಿದು ಬರಬೇಕಾಗಿದೆ.
Advertisement
Advertisement