ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ದೀಪಾವಳಿ ಸಂಭ್ರಮಾಚರಣೆ, ರೋಟೇರಿನ್ ಆನ್ಸ್ ಪದಗ್ರಹಣ ಸಮಾರಂಭ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ರೋಟರಿ ಟೌನ್ ಅಧ್ಯಕ್ಷ ಶನ್ಫತ್ ಶರೀಫ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಸಾಲಿಯಾನ್, ಆನ್ಸ್ ಕ್ಲಬ್ನ ನಿರ್ಗಮಿತ ಅಧ್ಯಕ್ಷೆ ಸವಿತಾ ಶೆಟ್ಟಿ, ಕಾರ್ಯದರ್ಶಿ ಜಶ್ಮಿ ಕಿಶೋರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೂತನ ಆನ್ಸ್ ಅಧ್ಯಕ್ಷತೆಯಾಗಿ ವಿದ್ಯಾ ಉಮೇಶ ಮೂಲ್ಯ , ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆಗೊಳಿಸಲಾಯಿತು. ಸದಸ್ಯೆ ಗಾಯತ್ರಿ ಅತಿಥಿಗಳನ್ನು ಪರಿಚಯಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದೀಪಾವಳಿ ಹಬ್ಬದ ಸಂಭ್ರಮವನ್ನು ನೆರವೇರಿಸಲಾಯಿತು.