ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಕಾರ್ಯಲಯ ಉದ್ಘಾಟನಾ ಸಮಾರಂಭ ಜ.14ರಂದು ಶನಿವಾರ ಬೆಳಿಗ್ಗೆ 11.30ಕ್ಕೆ ನಡೆಯಲಿದೆ.
ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಾಲಯ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ಬಿ.ಸಿ.ರೋಡಿನ ಸೋಮಯಾಜಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ರಮೇಶಾನಂದ ಸೋಮಯಾಜಿ, ಪಾಣೆಮಂಗಳೂರು ಶ್ರೀಶಾರದಾ ಪ್ರೌಢಶಾಲೆಯ ಸಂಚಾಲಕ ಡಾ. ಪಿ. ವಿಶ್ವನಾಥ ನಾಯಕ್ ಭಾಗವಹಿಸಲಿರುವರು. ಇದೇ ದಿನ ಬೆಳಿಗ್ಗೆ 9.30ರಿಂದ ಪ್ರತೀ ತಿಂಗಳ ಸಂಕ್ರಮಣದಂದು ನಡೆಯುವ ಸತ್ಯನಾರಾಯಣ ಪೂಜೆ ಜರುಗಲಿದ್ದು 11 ಗಂಟೆಗೆ ಮಹಾಪೂಜೆ ಜರುಗಲಿದೆ.
Advertisement
Advertisement