ಬಂಟ್ವಾಳ: 41 ಗ್ರಾಮದಲ್ಲಿ ಗ್ರಾಮ ವಿಕಾಸ ಪಾದಯಾತ್ರೆ ಸಾಗಿ ಬಂದಿದ್ದು ಜನರ ಪ್ರೀತಿ, ವಿಶ್ವಾಸವನ್ನು ಗಮನಿಸಿದಾಗ ಇಲ್ಲಿ ರಾಹುಲ್ ಗಾಂಧಿಯಾದಿಯಾಗಿ ಯಾರೇ ಕಾಂಗ್ರೆಸ್ ನಾಯಕರು ಬಂದು ಚುನಾವಣೆಯಲ್ಲಿ ಸ್ಪರ್ಧಿಸಿದರೂ ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ ಗೆಲುವು ಸಾಧಿಸುತ್ತಾರೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹೇಳಿದರು.
ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆದ ಗ್ರಾಮ ವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 9ನೇ ದಿನದ ಪಾದಯಾತ್ರೆಯು ಸಮಾರೋಪವಾಗಿ ಸಂಗಬೆಟ್ಟು ಗ್ರಾಮದ ಗ್ರಾಮ ಸಿದ್ದಕಟ್ಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ನ ಗ್ಯಾರೆಂಟಿ, ವಾರಂಟಿ ಮುಗಿದಿದೆ. ಇನ್ನೆಂಥ ಗ್ಯಾರೆಂಟಿ ಇದೆ ನಿಮಗೆ ಎಂದು ಪ್ರಶ್ನಿಸಿದ ಅವರು ನಕಲಿ ಗಾಂಧಿಗಳಿಂದ ದೇಶಕ್ಕೆ ಮೋಸ ಆಗಿದೆ ಎಂದು ಟೀಕಿಸಿದರು. ಈ ದೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಅವರ ಗರೀಭಿ ಹಠಾವೋ ಆಗಿದೆ. ರಾಜೇಶ್ ನಾಯ್ಕ್ ಶಾಸಕರು ಆದ ಬಳಿಕ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಆಗಿದೆ ಎಂದು ತಿಳಿಸಿದರು.
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ರಾಜಕೀಯಾ ಆಧಿಕಾರ ಶಾಶ್ವತ ಅಲ್ಲ, ಜನರು ನೀಡಿದ ಪ್ರೀತಿ ವಿಶ್ವಾಸವೇ ಶಾಶ್ವತ ಎಂದು ತಿಳಿಸಿದರು.
ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕ.ನ.ನೀ.ಸ. ಮತ್ತು ಒ.ಚ. ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ. ಭಟ್, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಗ್ರಾಮ ವಿಕಾಸ ಯಾತ್ರೆಯ ಸಹ ಸಂಚಾಲಕರಾದ ಮಾಧವ ಮಾವೆ, ಸುದರ್ಶನ ಬಜ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಸಂಗಬೆಟ್ಟು ಗ್ರಾ.ಪಂ ಅಧ್ಯಕ್ಷೆ ಸತೀಶ್ ಪೂಜಾರಿ ಅಳಕ್ಕೆ, ಕುಕ್ಕಿಪಾಡಿ ಗ್ರಾ.ಪಂ ಅಧ್ಯಕ್ಷೆ ಸುಜಾತ, ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಉಪಸ್ಥಿತರಿದ್ದರು.
ಮಂಡಲ ಕಾರ್ಯದರ್ಶಿ ರಮಾನಾಥ ರಾಯಿ ಸ್ವಾಗತಿಸಿದರು, ಸಂಚಾಲಕ ದೇವದಾಸ್ ಶೆಟ್ಟಿ ಶಾಸಕರ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮುಖಪುಟ
ಸುದ್ದಿ
ಬಂಟ್ವಾಳ ಫರಂಗಿಪೇಟೆ
ವಾಮದಪದವು
ವಿಟ್ಲ
ಮಾಣಿ
ಕಲ್ಲಡ್ಕ
ವಿಶೇಷ-ವೈವಿಧ್ಯ
ಸಮಾಜಮುಖಿ
ಯೂಟ್ಯೂಬ್ ಚಾನೆಲ್/ವಿಡಿಯೋ
ಜನರ ಪ್ರೀತಿ, ವಿಶ್ವಾಸವೇ ಶಾಶ್ವತ: ರಾಜೇಶ್ ನಾಯ್ಕ್
Advertisement
Advertisement
Related Posts
Add A Comment