Advertisement
ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ, ಎಸ್ ಡಿ ಎಂ ಸಿ ಸದಸ್ಯರಾದ ಸೀತಾರಾಮ ಅಗೊಳಿಬೆಟ್ಟು, ದಿನಕರ್, ರವಿ ಪಂಬದ, ನಳಿನಿ, ಪ್ರಮುಖರಾದ ವಿಶ್ವನಾಥ ಕೊಟ್ಟಾರಿ ಉಪಪ್ರಾಂಶುಪಾಲೆ ಜಯಲಕ್ಷ್ಮಿ ಪಿ.ಎನ್, ಶಾಲಾ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳಾದ ರವೀಣ ಬಂಗೇರ, ಶಿವರಾಮ ಮರ್ತಾಜೆ, ಪ್ರತಿಭಾ ಉಪಸ್ಥಿತರಿದ್ದರು.
Advertisement