ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ಎಂದು ಬಂಟ್ವಾಳ
ಜೆಎಮ್ಎಫ್ನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ವೈ ಕಳವಾರ ಇವರು ತಿಳಿಸಿದರು.
ಮತದಾರ ಸಾಕ್ಷಾರತಾ ಸಂಘ, ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ, ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪಾರದರ್ಶಕ ಆಡಳಿತ ವ್ಯವಸ್ಥೆ ರೂಪಿಸಲು ಸಂವಿಧಾನವು ನಮಗೆ ಅತ್ಯಮೂಲ್ಯವಾದ ಮತದಾನದ ಹಕ್ಕು ನೀಡಿದೆ. 18ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶಿವಪ್ರಕಾಶ್ ಮಾತನಾಡಿ ಪ್ರಪಂಚದ ಹಲವಾರು ದೇಶಗಳಲ್ಲಿ ಮತದಾನದ ಹಕ್ಕನ್ನು ಪಡೆಯಲು ಕೆಲವು ನಿಬಂಧನೆಗಳಿದ್ದು, ಭಾರತವು ಈ ಪಟ್ಟಿಯಲ್ಲಿ ಅತ್ಯಂತ ವಿಶಿಷ್ಟವಾದ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಎಂಬುವುದು ಪ್ರಜೆಗಳಿಗಿರುವ ಅತ್ಯಂತ ಪ್ರಬಲವಾದ ಅಸ್ತ್ರ. ತಮ್ಮ ನಾಯಕನನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಒಂದು ಅಪರೂಪದ ಅವಕಾಶವನ್ನು ಮತದಾನ ನೀಡುತ್ತದೆ. ಪ್ರತಿಯೊಬ್ಬನೂ ಕೂಡ ಮತದಾನದ ಗುರುತಿನ ಚೀಟಿ ಹೊಂದಿರಬೇಕು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ| ಸುಯೋಗ ವರ್ಧನ್ ಡಿ.ಎಂ. ಮಾತನಾಡಿ ಮತದಾನದ ಹಕ್ಕನ್ನು ನಾವು ಸೂಕ್ತವಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ. ಇಂದಿನ ಯುವಜನತೆ ಚುನಾವಣೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಅಮೂಲ್ಯ ಮತ ಚಲಾಯಿಸಬೇಕೆಂದು ಹೇಳಿ ನೆರೆದವರಿಗೆ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಎಸ್.ವಿ.ಎಸ್ ವಿದ್ಯಾಸಂಸ್ಥೆಯ ಸಂಚಾಲಕಿ ಕೆ. ರೇಖಾ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮತದಾರರ ಸಾಕ್ಷಾರತಾ ಯೋಜನೆಯ ಕಾಲೇಜಿನ ನೋಡಲ್ ಅಧಿಕಾರಿ ಡಾ| ವಿನಾಯಕ ಕೆ.ಎಸ್ ಸ್ವಾಗತಿಸಿ, ಕಿಟ್ಟು ಕೆ ನಿರೂಪಸಿ, ಡಾ| ಕಾಶೀನಾಥ ಶಾಸ್ತ್ರಿ ಹೆಚ್.ವಿ. ಶಾಸ್ತ್ರಿ ಹೆಚ್.ವಿ. ವಂದಿಸಿದರು. ಈ ಕಾರ್ಯಕ್ರಮದಲ್ಲಿ, ಬಂಟ್ವಾಳ ಜೆಎಮ್ಎಫ್ನ ಮೋಹನ್ ಪ್ರಭು ಕೆ., ಹರಿಣಿ ಕುಮಾರಿ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.