ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಚಂಡಿಕಾನಗರದಲ್ಲಿರುವ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರೋತ್ಸವ ಫೆ.22ರಿಂದ 28ರವರೆಗೆ ನಡೆಯುವ ಹಿನ್ನೆಲೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಕ್ಷೇತ್ರದಲ್ಲಿ ನಡೆಯಿತು. ಉದ್ಯಮಿ ರವಿ ಶೆಟ್ಟಿ ಕತಾರ್ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕೋಶಾಧಿಕಾರಿ ಐತಪ್ಪ ಆಳ್ವ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಚರಣ್ ಜುಮಾದಿಗುಡ್ಡೆ, ಪ್ರದೀಪ್ ರಾವ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ಬಿ.ರಾಮಚಂದ್ರ ರಾವ್, ಜೊತೆ ಕಾರ್ಯದರ್ಶಿ ಐತಪ್ಪ ಪೂಜಾರಿ, ಕೋಶಾಧಿಕಾರಿ ಸಂಕಪ್ಪ ಶೆಟ್ಟಿ ಸಹಿತ ವಿವಿಧ ಸಮಿತಿಗಳ ಪ್ರಮುಖರು ಹಾಜರಿದ್ದರು.
Advertisement
Advertisement
Advertisement
Advertisement