ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಅವರ ಜನ್ಮಶತಾಬ್ದಿ ಆಚರಣೆಯ ಪೂರ್ವಭಾವಿ ಸಭೆ ಬಿ.ಸಿ.ರೋಡಿನಲ್ಲಿ ಶನಿವಾರ ಸಂಜೆ ನಡೆಯಿತು.
ಡಾ. ಸೋಮಸುಂದರ್ ರಾವ್ ಅವರ ಮನೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ನಿವೃತ್ತ ಬಿಎಸ್ ಎಫ್ ಕಮಾಂಡೆಂಟ್ಸ್ ಚಂದಪ್ಪ ಮೂಲ್ಯ, ದ.ಕ. ಜಿಲ್ಲಾ ಮೂಲ್ಯರ ಯಾನೇ ಕುಲಾಲ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪುಂಡರಿಕಾಕ್ಷ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಬಂಟ್ಚಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ, ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೋಜ ಮೂಲ್ಯ, ಪ್ರಮುಖರಾದ ದಯಾನಂದ ಬೆಳ್ಳೂರು, ಮಚ್ಚೇಂದ್ರ ಸಾಲ್ಯಾನ್, ಜಲಜಾಕ್ಷಿ ಕುಲಾಲ್, ಸುರೇಶ್ ಕುಮಾರ್ ನಾವೂರು, ಶ್ರೀನಿವಾಸ ದೈಪಲ ಮತ್ತಿತರರು ಉಪಸ್ಥಿತರಿದ್ದರು.
ದಾಮೋದರ್ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಪಿ.ಕೆ. ವಂದಿಸಿದರು