Advertisement
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ಹಸ್ತಾಂತರಿಸಲಾಯಿತು.
ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಉಪಾಧ್ಯಕ್ಷ ಕಿಶೋರ್ ಆಚಾರ್ಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಹಾಜರಿದ್ದರು.
Advertisement