ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಊರ ಪರವೂರ ದಾನಿಗಳು ಹಾಗೂ ಕುಡುಬಿ ಸಮಾಜದ ವತಿಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನ ಸಿದ್ದಕಟ್ಟೆ ಕೋರ್ಯಾರು ಎಂಬಲ್ಲಿ ನಿರ್ಮಿಸಲಾದ ಕುಡುಬಿ ಸಮುದಾಯ ಭವನದ ಶ್ರೀ ದುರ್ಗಾ ಸಭಾ ಭವನ ಹಾಗೂ ಮಹಮ್ಮಾಯಿ ಅನ್ನಛತ್ರ ಮತ್ತು ಪಾಕಶಾಲೆಯು ಫೆ.12ರಂದು ಭಾನುವಾರ ಲೋಕಾರ್ಪಣೆಗೊಳ್ಳಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹೇಮಚಂದ್ರ ಗೌಡ ಸಿದ್ದಕಟ್ಟೆ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ಸಿದ್ಧಕಟ್ಟೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕುಡುಬಿ ಸಮುದಾಯ ಭವನವನ್ನು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ, ಅನ್ನಛತ್ರವನ್ನು ಇಂಧನ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ, ಪಾಕಶಾಲೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ, ಸಭಾ ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ದೀಪ ಪ್ರಜ್ವಲಿಸುವರು, ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸುವರು. ಪೂಂಜ ಕ್ಷೇತ್ರ ಶ್ರೀ ಕೃಷ್ಣ ಪ್ರಸಾದ್ ಅಸ್ರಣ್ಣರು, ಪ್ರಧಾನ ಅರ್ಚಕ ಪಿ ಪ್ರಕಾಶ್ ಆಚಾರ್ಯ, ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಸಂಗಬೆಟ್ಟು ಇಲ್ಲಿನ ಅರ್ಚಕ
ಪ್ರಭಾಕರ್ ಐಗಳ್ ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಬೂಡ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.
ಅದೇ ದಿನ 56ನೇ ವರ್ಷದ ಭಜನಾಮಂಗಳೋತ್ಸವ, ಸಾರ್ವಜನಿಕ ಶ್ರೀ ಶನಿ ಪೂಜೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ದೇವಿ ಮಹಾತ್ಮೆ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ.


