ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಲಿಕಾ ಹಬ್ಬಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಧಾಕರ್ ಕೆ. ಬುಧವಾರ ಚಾಲನೆ ನೀಡಿದರು.
ಅವರು ಮಾತನಾಡಿ ಸುಧಾಕರ್ ಕೆ, ಮಕ್ಕಳ ಸರ್ವಾಂಗೀಣ ಅಭ್ಯುದಯಕ್ಕಾಗಿ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಮಕ್ಕಳೊಂದಿಗೆ ಶಿಕ್ಷಕರೂ ಪಡೆದುಕೊಳ್ಳಬೇಕು. ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಇಂತಹ ಕಾರ್ಯಕ್ರಮಗಳು ಶೈಕ್ಷಣಿಕ ವರ್ಷದ ಆರಂಭದಲ್ಲಿ ಬಂದರೆ ಉತ್ತಮ. ಮೇಲ್ ಹಂತದಲ್ಲಿ ಅಧಿಕಾರಿಗಳ ಹೇರಿಕೆಯಿಂದ ಗೊಂದಲ ಉಂಟಾಗುತ್ತದೆ. ಇಂತಹ ವೈರುದ್ಯಗಳ ಬಗ್ಗೆ ಸಂಘಟನೆಯ ಮೂಲಕ ಇಲಾಖೆಯ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದರು. ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಹಬ್ಬದ ವಾತವಾರಣಲ್ಲಿ ವಿದ್ಯಾಭ್ಯಾಸ ಕಲಿತರೆ ಅದು ಪರಿಣಾಮಕಾರಿ ಯಾಗುತ್ತದೆ ಎನ್ನುವ ಉದ್ದೇಶದಿಂದ ಕಲಿಕಾ ಹಬ್ಬ ಆಯೋಜಿಸಲಾಗಿದೆ. ಶಾಲೆಗಳಲ್ಲಿ ಸರಕಾರಿ ಮಟ್ಟದ ಕಾರ್ಯಕ್ರಮವನ್ನು ಡಿಸೆಂಬರ್ ತಿಂಗಳಲ್ಲಿ ಮುಗಿಸಬೇಕು. ಇಂತಹ ಸಮಸ್ಯೆಗಳನ್ನು ಪರಿಹರಿಸದಲ್ಲಿ ಸರಕಾರಿ ಶಾಲೆಗಳು ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭ ಜಿಲ್ಲಾ ಯೋಜನೆ ಉಪಸಮ್ವಯಾಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕದ ಡಾ. ಸುಮಂಗಲಾ ಸುಬ್ರಾಯ ನಾಯಕ್, ಹಾಗೂ ಮಂಜುಳಾ ಕೆ.ಎಲ್,. ವಿಷಯ ಪರಿವೀಕ್ಷಕರಾದ ಶೋಭಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ವಿಮಲ್ ಕುಮಾರ್ ನೆಲ್ಯಾಡಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಉಷಾ, ಆಶಾ ನಾಯಕ್, ಜಿಲ್ಲಾ ಬಿಐಇಆರ್ ಟಿ ಸಂಘದ ಅಧ್ಯಕ್ಷ ನಾಗರಾಜ ಮದ್ದೋಡಿ, ಬಂಟ್ವಾಳ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮುರಳೀಕೃಷ್ಣ ರಾವ್, ಬಂಟ್ವಾಳ ಬಿಆರ್ ಸಿ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ಪತ್ರಕರ್ತ ಹರೀಶ ಮಾಂಬಾಡಿ, ಶಾಲಾ ಎಸ್.ಡಿ.ಎಂ.ಸಿ. ಸದಸ್ಯರಾದ ವೇದಾವತಿ, ಜಿನ್ನಪ್ಪ, ಆನಂದ ಸಾಲ್ಯಾನ್, ಮೋಹನದಾಸ ಮತ್ತಿತರರು ಉಪಸ್ಥಿತರಿದ್ದರು.
ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಮಮತಾ ಕಾರ್ಯಕ್ರಮ ನಿರ್ವಹಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕಮಲಾಕ್ಷ ವಂದಿಸಿದರು.
ಮುಖಪುಟ
ಸುದ್ದಿ
ಬಂಟ್ವಾಳ ಫರಂಗಿಪೇಟೆ
ವಾಮದಪದವು
ವಿಟ್ಲ
ಮಾಣಿ
ಕಲ್ಲಡ್ಕ
ವಿಶೇಷ-ವೈವಿಧ್ಯ
ಸಮಾಜಮುಖಿ
ಯೂಟ್ಯೂಬ್ ಚಾನೆಲ್/ವಿಡಿಯೋ
ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಲಿಕಾ ಹಬ್ಬಕ್ಕೆ ಚಾಲನೆ
Advertisement
Next Article ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ
Related Posts
Add A Comment