ಬಂಟ್ವಾಳ: ಉಳಿ ಗ್ರಾಮದ ಕಾಂಗ್ರೆಸ್ ಉಪಾಧ್ಯಕ್ಷ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ ಪೂಜಾರಿ ಜಾರಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಗೋಪಾಲ್ ಪೂಜಾರಿಯವರು ಶನಿವಾರ ಬಿಜೆಪಿ ಸೇರ್ಪಡೆಗೊಂಡರು.
ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಹಾಗೂ ಬಿಜೆಪಿ ಪಾರ್ಟಿಯ ತತ್ವ ಸಿದ್ದಾಂತವನ್ನು ಮೆಚ್ಚಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂಧರ್ಭದಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ , ಜಿಲ್ಲಾ ಪಂಚಾಯತಿ ಮಾಜಿವ ಸದಸ್ಯ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಯುವಮೊರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಕ್ಷೇತ್ರ ಉಪಾಧ್ಯಕ್ಷ ಚಿದಾನಂದ ರೈ ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯ, ಕ್ಷೇತ್ರ ಒಬಿಸಿ ಮೋರ್ಚಾ ಅಧ್ಯಕ್ಷ ಆನಂದ ಶಂಭೂರು, ಉಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸುರೇಶ್ ಪೂಜಾರಿ, ಶಾಂತಪ್ಪ ಪೂಜಾರಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು