ಬಂಟ್ವಾಳ: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ, ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ದಕಟ್ಟೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಿದ್ದಕಟ್ಟೆ ಹಾಗೂ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಿದ್ದಕಟ್ಟೆಯ ಹರ್ಷಾಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಟ್ರಸ್ಟ್ ಅಧ್ಯಕ್ಷ ರಮೇಶ್ ನಾಯಕ್ ರಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮಾರ್ಗದರ್ಶನದಂತೆ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಆರಂಭಗೊಂಡಿದ್ದು ಬಡವರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ಆರೋಗ್ಯ ಶಿಬಿರದಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.ಇದರ ಜೊತೆಗೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಸಾಧಕರಿಗೆ ಗೌರವ, ಎಲೆಮರೆ ಕಾಯಿಯಂತಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾರ್ಯವನ್ನು ಟ್ರಸ್ಟ್ ಮಾಡಿಕೊಂಡು ಬರುತ್ತಿದೆ ಎಂದರು.
ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ವೈದ್ಯ ವಿವೇಕ್ ಎಸ್. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಎಲ್ಲರೂ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಯೋಗಪಟು ಗವೀಶ್, ಭಾಷಣ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ಲಿಖಿತಾ, ಹಿರಿಯ ರಿಕ್ಷಾ ಚಾಲಕ ಸಂಜೀವ ನಾಯ್ಕ ಅವರನ್ನು ಗೌರವಿಸಲಾಯಿತು. ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ ಜೈನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಸಿದ್ದಕಟ್ಟೆ ಶಾರದೋತ್ಸವ ಆಚರಣ ಸಮಿತಿ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಗೌರವಾಧ್ಯಕ್ಷ ಗೋಪಾಲ ಬಂಗೇರ , ಮಹಿಳಾ ಸಮಿತಿ ಅಧ್ಯಕ್ಷೆ ಅರುಣ ವಿ. ಪೂಜಾರಿ,ಸಿದ್ದಕಟ್ಟೆ ವಲಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿಗಾರ್, ಶಾರದೋತ್ಸವ ಆಚರಣಾ ಮಹಿಳಾ ಸಮಿತಿ ಅಧ್ಯಕ್ಷೆ ಜಲಜ, ಟ್ರಸ್ಟ್ ನ ಕೋಶಾಧಿಕಾರಿ ಅರ್ಫಾಝ್ ಮೊದಲಾದವರು ಉಪಸ್ಥಿತರಿದ್ದರು.
ದಾಮೋದರ್ ದೋಟ ಸ್ವಾಗತಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಅಧ್ಯಕ್ಷ ದಿನೇಶ್ ಸುಂದರ್ ಶಾಂತಿ ವಂದಿಸಿದರು.ಉಮೇಶ್ ಹಿಂಗಾಣಿ ಸನ್ಮಾನ ಪತ್ರ ವಾಚಿಸಿದರು.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಸಾಮಾನ್ಯ ರೋಗ ತಪಾಸಣೆ, ಎಲುಬು ಮತ್ತು ಕೀಲು, ಚರ್ಮ ಚಿಕಿತ್ಸೆ, ಉಚಿತ ಇಸಿಜಿ, ಕಿವಿ ಮೂಗು ಗಂಟಲು ವಿಭಾಗ, ರಕ್ತದೊತ್ತಡ, ಸಕ್ಕರೆ ರೋಗ ಪರೀಕ್ಷೆ, ಸ್ತ್ರೀ ರೋಗ ತಪಾಸಣೆ ನಡೆಯಿತು.