ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಮೆಸ್ಕಾಂ ಲೈನ್ಮ್ಯಾನ್ ಕೆ. ಶೀನಾ ಮೊಡಂಕಾಪು ಇವರಿಗೆ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Advertisement
ಶುಕ್ರವಾರ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಅಧ್ಯಕ್ಷ ರಾಜೇಂದ್ರ ಕೆ. ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ರೈ ಅವರು ಘಟಕಾಭಿವೃದ್ದಿ ಮತ್ತು ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಗಾರ ನಡೆಸಿಕೊಟ್ಟರು. ಕಾರ್ಯದರ್ಶಿ ರಶ್ಮಿ ಶೆಟ್ಟಿ, ಕೋಶಾಧಿಕಾರಿ ಶ್ರೀನಿವಾಸ ಅರ್ಬಿಗುಡ್ಡೆ ಹಗೂ ಜೆಸಿಐ ಬಂಟ್ವಾಳದ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
Advertisement