ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸೊತ್ತುಗಳು ಅಗ್ನಿಗಾಹುತಿಯಾದವು. ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಕಲ್ಲಡ್ಕದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಆಗಮಿಸುವುದು ತಡವಾದರೂ ಬಳಿಕ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ.
Advertisement
Advertisement