ಬಂಟ್ವಾಳ: ಆರಂಭದ ದಿನಗಳಲ್ಲಿ ನೆರೆ ಸಮಸ್ಯೆ ಮತ್ತು ಕೋವಿಡ್ ನಿಂದ ತತ್ತಿರಿಸಿದರೂ ಕಳೆದ ಎರಡು ವರ್ಷದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರದ್ಯಂತ ಸಾಕಷ್ಡು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಶಾಸಕನಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ನನ್ನ ಕರ್ತವ್ಯ. ಈಗ ಆಗಿರುವ ಅಭಿವೃದ್ಧಿ ಕಾರ್ಯದಲ್ಲಿ ತೃಪ್ತಿ ಇದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.


ಕರ್ಪೆ ಗ್ರಾಮದಲ್ಲಿ 8.34 ಕೋಟಿ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ
ಕರ್ಪೆ ಗುತ್ತಿಗೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಕಾಲಘಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಸುಳ್ಳು ಮಾಹಿತಿ ನೀಡಲು ಸಾಧ್ಯವಿಲ್ಲ. ಈಗ ಆಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು. ಕಳೆದ ನಾಲ್ಕು ವರ್ಷ ಹತ್ತು ತಿಂಗಳಿನಲ್ಲಿ ನನ್ನ ಕ್ಷೇತ್ರ ಗಲಭೆ, ದೊಂಬಿಗಳಿಲ್ಲದೆ ಶಾಂತಿ, ಅಭಿವೃದ್ಧಿಯ ಕ್ಷೇತ್ರವಾಗಿ ಪರಿವರ್ತಿತವಾರುವುದು ಖುಷಿ ನೀಡಿದೆ ಎಂದರು.

ವೇದಿಕೆಯಲ್ಲಿ ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಪೂಜಾರಿ ಅಳಕ್ಕೆ, ಉಪಾಧ್ಯಕ್ಷೆ ವಿಮಾಲ ಮೋಹನ್, ತಾ.ಪಂ. ಮಾಜಿ ಸದಸ್ಯ ರತ್ನಕುಮಾರ್ ಚೌಟ, ನಿವೃತ್ತ ಶಿಕ್ಷಕ ನಾರಾಯಣ ನಾಯ್ಕ್, ಮಂದಾರತಿ ಶೆಟ್ಟಿ ಉಪಸ್ಥಿತರಿದ್ದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಪ್ರಾಸ್ತವಿಕವಾಗಿ ಮಾತನಾಡಿದರು.ತಾ.ಪಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ಸ್ವಾಗತಿಸಿ , ಕಾರ್ಯಕ್ರಮ ನಿರೂಪಿಸಿದರು
