ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಅತೀ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದ ಮೂಡೂರು – ಪಡೂರು ಜೋಡಕರೆ ಬಯಲು ಕಂಬಳ ಕಳೆದ ವರ್ಷದಿಂದ ಬಂಟ್ವಾಳ ಕಂಬಳವಾಗಿ ಪುನಾರಂಭಗೊಂಡಿದ್ದು ಮಾಜಿ ಸಚಿವ ಬಿ. ರಮಾನಾಥ ರೈ ಗೌರವಾಧ್ಯಕ್ಷತೆಯಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ, ಜಿ.ಪಂ. ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಅವರ ಕಾರ್ಯಧ್ಯಕ್ಷತೆಯಲ್ಲಿ ಪದ್ಮಶೇಖರ್ ಜೈನ್ ಅವರ ಸಂಚಾಲಕತ್ವದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಮೂಡೂರು- ಪಡೂರು ಜೋಡುಕರೆ ಬಯಲು ಕಂಬಳ ನಾಳೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುವಿನಲ್ಲಿ ನಡೆಯಲಿದೆ.
ಕಂಬಳಕ್ಕೆ ಸಕಲ ಸಿದ್ದತೆಗಳು ಪೂರ್ಣಗೊಂಡಿದ್ದು ಬೆಳಿಗ್ಗೆ ಗಂಟೆ 8.45ಕ್ಕೆ ಕಂಬಳ ಉದ್ಘಾಟನೆಗೊಳ್ಳಲಿದೆ. ಕೂಟದಲ್ಲಿ ಪೀಠಾಧಿಪತಿಗಳು, ಧರ್ಮಗುರುಗಳು, ರಾಜಕೀಯ ನಾಯಕರು, ಸಾಮಾಜಿಕ ಕ್ಷೇತ್ರದ ಸಾಧಕರು, ಭಾಗವಹಿಸಲಿದ್ದಾರೆ. ಸಂಜೆ 7.೦೦ ರಿಂದ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮೊಡಂಕಾಪು ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ. ವಂ. ವಲೇರಿಯನ್ ಡಿಸೋಜಾ, ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ. ಹಲವಾರು ವಿಶೇಷತೆಗಳೊಂದಿಗೆ, ಹೊಸತನದೊಂದಿಗೆ ಮೂಡೂರು- ಮಡೂರು ಜೋಡುಕರೆ ಬಯಲು ಕಂಬಳ ಸಂಪನ್ನಗೊಳ್ಳಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್ ತಿಳಿಸಿದ್ದಾರೆ.