ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುವಿಲ್ಲಿ ಬಂಟ್ವಾಳ ಕಂಬಳ ಹೆಸರಿನಲ್ಲಿ ನಡೆಯುತ್ತಿರುವ 12ನೇ ವರ್ಷದ ಮೂಡೂರು ಪಡೂರು ಜೊಡುಕರೆ ಬಯಲು ಕಂಬಳಕ್ಕೆ ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ಶನಿವಾರ ಬೆಳಿಗ್ಗೆ ಅದ್ದೂರಿಯ ಚಾಲನೆ ನೀಡಿದರು.
ಬಳಿಕ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಸಾಮಾಜಿಕ ಕಾರ್ಯಕ್ರಮ ಎಲ್ಲಾ ವರ್ಗದ ಜನರನ್ನು ಕೈ ಬೀಸಿ ಕರೆಯುವಂತಿರಬೇಕು, ಆ ನಿಟ್ಟಿನಲ್ಲಿ ಮೂಡುರು ಪಡೂರು ಕಂಬಳ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ನಡೆಯುತ್ತಿರುವುದು ಗಮನಾರ್ಹ. ಕೂಡಿಬೈಲಿನಲ್ಲಿ ಕೂಡಿ ಬಾಳುವ ಎನ್ನುವ ಸಂದೇಶವನ್ನು ನೀಡುವ ಮೂಲಕ ಈ ಕಂಬಳ ನಡೆಯುತ್ತಿದೆ ಎಂದರು.
ಅಲ್ಲಿಪಾದೆ ಸಂತ ಅಂಥೋನಿ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ ಮೊಂತೆರೋ ಅವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿ ಜಾತಿ ಧರ್ಮದ ಚೌಕಟ್ಟನ್ನು ಮೀರಿ ಎಲ್ಲಾ ಸಮುದಾಯದ ಜನರು ಬರುವ ಕಂಬಳ ಮೂಡುರು ಪಡೂರು ಕಂಬಳ. ಕಂಬಳ ಸಮಿತಿ ಹಾಗೂ ಸ್ಥಳೀಯರ ತ್ಯಾಗ ಪರಿಶ್ರಮದ ಫಲವಾಗಿ ನಾವೂರಿನಲ್ಲಿ ಎರಡನೇ ವರ್ಷವೂ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದು ಅಭಿನಂದನೀಯ ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಜೆ.ಆರ್.ಲೋಬೋ, ನಾವೂರು ಗ್ರಾ.ಪಂ. ಅಧ್ಯಕ್ಷ ಉಮೇಶ್ ಕುಲಾಲ್, ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಿ. ಜಿನರಾಜ ಅರಿಗ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ರಚನಾ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಲಿಯೋ ಫೆರ್ನಾಂಡಿಸ್, ನಾವೂರು ಗ್ರಾ ಪಂ ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಕಂಬಳ ಸಮಿತಿ ಕಾರ್ಯಧ್ಯಕ್ಷ ಬಿ. ಪದ್ಮಶೇಖರ್ ಜೈನ್, ಕಾರ್ಯಧ್ಯಕ್ಷ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ರ್ಪರೆಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಎಂ.ಎಸ್. ಮಹಮ್ಮದ್, ಪ್ರಮುಖರಾದ ಜಯಂತಿ ಪೂಜಾರಿ, ಫ್ಲೋಸಿ ಡಿಸೋಜ, ಸದಾಶಿವ ಬಂಗೇರ, ಬಿ ಎಂ ಅಬ್ಬಾಸ್ ಅಲಿ, ಎ ಕೆ ಪದ್ಮನಾಭ ರೈ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಪೂಜಾರಿ ಜೋರಾ,ಸಿದ್ದೀಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ, ಜನಾರ್ದನ ಚೆಂಡ್ತಿಮಾರ್, ಮಹಾಬಲ ಆಳ್ವ, ಅವಿಲ್ ಮಿನೇಜಸ್, ದೇವಿಪ್ರಸಾದ್ ಪೂಂಜಾ, ಸ್ಟೀವನ್ ಡಿಸೋಜ, ಪರಮೇಶ್ವರ ಮೂಲ್ಯ, ಮಲ್ಲಿಕಾ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಮಹಾಬಲ ಆಳ್ವ, ಮೆಲ್ವಿನ್ ಡಯಾಸ್, ಜಗದೀಶ್ ಕೊಯಿಲ, ನಾರಾಯಣ ನಾಯ್ಕ, ಡೆಂಝಿಲ್ ನೊರೊನ್ಹಾ, ತಿಲಕ್ ಮಂಚಿ, ಸಂಜಿತ್ ಪೂಜಾರಿ, ವೆಂಕಪ್ಪ ಪೂಜಾರಿ, ರಮೇಶ್ ಪಣೋಲಿಬೈಲು, ಮೊದಲಾದವರು ಭಾಹವಹಿಸಿದ್ದರು. ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೊಡ್ರಿಗಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಮಾಣಿ ಗ್ರಾ. ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.