ಬಂಟ್ವಾಳ: ಕಂಬಳ ಹಾಗೂ ಯಕ್ಷಗಾನ ನಮ್ಮ ಜಿಲ್ಲೆಯ ಜಾನಪದ ಕ್ಷೇತ್ರದ ಕಣ್ಣುಗಳು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ವಿಧಾನಸಭೆಯ ವಿರೋದ ಪಕ್ಷದ ಉಪನಾಯಕ ಯು.ಟಿ.ಖಾದರ್ ಹೇಳಿದರು.
ಮಾಝಿ ಸಚಿವ ಬಿ. ರಮನಾಥ ರೈ ಗೌರವಾಧ್ಯಕ್ಷತೆಯಲ್ಲಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುವಿಲ್ಲಿ ಬಂಟ್ವಾಳ ಕಂಬಳ ಹೆಸರಿನಲ್ಲಿ ನಡೆಯುತ್ತಿರುವ 12ನೇ ವರ್ಷದ ಮೂಡೂರು ಪಡೂರು ಜೊಡುಕರೆ ಬಯಲು ಕಂಬಳದ ಪ್ರಯುಕ್ಯ ಶನಿವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮೂಡೂರು ಪಡೂರು ಕಂಬಳ ಆಯೋಜಿಸುವ ಮೂಲಕ ತುಳುನಾಡಿನ ಕಂಬಳ ಸಂಸ್ಕೃತಿಯನ್ನು ಯುವಕರಿಗೆ ಪರಿಚಯಿಸುವ ಕಾರ್ಯ ಬಿ. ರಮನಾಥ ರೈ ಅವರಿಂದ ಆಗುತ್ತಿದೆ, ಕಂಬಳ ಕ್ರೀಡೆಯನ್ನು ನಿಲ್ಲಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದಾಗ ಅಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ ರೈ ಹಾಗೂ ಶಾಸಕರು ಸರ್ಕಾರದ ಮೂಲಕ ನ್ಯಾಯಲಯಕ್ಕೆ ಮನವರಿಕೆ ಮಾಡಿ ಕಂಬಳ ಪುನಾರಂಭಗೊಳ್ಳಲು ಕಾರಣೀಕರ್ತರಾಗಿದ್ದಾರೆ ಎಂದು ತಿಳಿಸಿದರು. ಮುಂದಿನ ಚುನಾವನೆಯಲ್ಲಿ ಮತ್ತೊಮ್ಮೆ ಅವರು ಗೆಲುವು ಸಾಧಿಸಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಗೆದ್ದು ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿಪಾದೆ ಸಂತ ಅಂಥೋನಿ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ ಮೊಂತೆರೋ, ವಿಧಾನ ಪರಿಷತ್ತ್ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ವಸಂತ ಬಂಗೇರ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ಆರ್.ಕೆ. ಪ್ರಮುಖರಾದ ರೋಹಿತ್ ಶೆಟ್ಟಿ ನಗ್ರಿಗುತ್ತು, ಶಾರ್ಲೆಟ್ ಪಿಂಟೋ, ಶೇಖರ್ ಕುಕ್ಕೇಡಿ, ವೆಂಕಪ್ಪ ಕಾಜವ, ಪ್ರಶಾಂತ್ ಕಾಜವ, ಪದ್ಮನಾಭ ಕೋಟ್ಯಾನ್, ಅಶೋಕ್ ಕುಮಾರ್ ರೈ, ಪದ್ಮರಾಜ್ ಆರ್., ಮಹಮ್ಮದ್ ಬಡಗನ್ನೂರು, ಉಮಾನಾಥ ಶೆಟ್ಟಿ, ಧರಣೇಂದ್ರ ಕುಮಾರ್, ಪ್ರತಿಭಾ ಕುಳಾಯಿ ಮತ್ತಿತರ ಗಣ್ಯರು ವೇದಿಕೆಯಲ್ಲಿ ಭಾಗವಹಿಸಿದ್ದರು. ರಚನಾ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಲಿಯೋ ಫೆರ್ನಾಂಡಿಸ್, ಕಂಬಳ ಸಮಿತಿ ಸಂಚಾಲಕ ಪದ್ಮಶೇಖರ್ ಜೈನ್, ಕಾರ್ಯಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಬೇಬಿ ಕುಂದರ್, ಸುದೀಪ್ ಕುಮಾರ್, ಎಂ.ಎಸ್. ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಕಂಬಳ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು.
ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು, ಮಾಣಿ ಗ್ರಾ. ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.