
ಬಂಟ್ವಾಳ: ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ರೂ. 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸರಕಾರಿ ಪದವಿಪೂರ್ವ ಕಾಲೇಜು ಬಿ.ಮೂಡ ಇದರ ನೂತನ ತರಗತಿ ಹಾಗೂ ಪ್ರಯೋಗಲಾಯ ಕೊಠಡಿಗಳನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ತಮಗೆ ಬೇಕಾದ ಶಿಕ್ಷಣವನ್ನು ಆಯ್ಕೆ ಮಾಡಿ ಶಿಕ್ಷಣದಲ್ಲಿ ಮುಂದುವರಿಯಲು ಹಾಗೂ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಸಿಗುವ ಆರ್ಥಿಕ ಪ್ರೋತ್ಸಾಹ ಧನವನ್ನು ಮೂವರು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಗುತ್ತಿಗೆದಾರ ಸುದರ್ಶನ ಬಜ ಅವರನ್ನು ಗೌರವಿಸಲಾಯಿತು. ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.




ಪುರಸಭಾ ಸದಸ್ಯೆ ಝೀನತ್ ಫಿರೋಜ್, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸುಷ್ಮಾ ಚರಣ್, ಸಚಿನ್, ಹರೀಶ್, ಭರತರಾಜ್, ರವೀಂದ್ರ, ಡಾ. ಶಾಮ್ ಭಟ್, ಯಶೋಧ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ, ಪಿಡಬ್ಲೂಡಿ ಎ.ಇ.ಇ.ಶಿವಶಂಕರ್, ಸಹಾಯಕ ಇಂಜಿನಿಯರ್ ಅಮೃತ್ ಕುಮಾರ್ ಸೋಲಂಕಿ, ಪ್ರಮುಖರಾದ ಮಚ್ಚೇಂದ್ರ ಸಾಲಿಯಾನ್, ರಮೇಶ್ ಸಾಲಿಯಾನ್, ಇಕ್ಬಾಲ್ ಗೂಡಿನ ಬಳಿ
ಉಪನ್ಯಾಸಕರಾದ ದಾಮೋದರ.ಇ, ಬಾಲಕೃಷ್ಣ ನಾಯ್ಕ್, ಕೆ. ಸೂರಜ್, ಲವೀನಾ ಶಾಂತಿ ಲೋಬೊ, ಲಕ್ಷ್ಮಿ ಆಚಾರ್ಯ, ದಿವ್ಯ, ಹರ್ಷಿತ, ರಾಧಾ, ಭಾರತಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.
—
